ಪ್ರವೀಣ್ ಮನೆಗೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ ➤ ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ಅಧ್ಯಕ್ಷ ನಳಿನ್ ಕಟೀಲ್ ಸಾಥ್

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.28. ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಯ ಹಿನ್ನೆಲೆಯಲ್ಲಿ ಸರಕಾರದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮೃತ ಪ್ರವೀಣ್ ರ ನೆಟ್ಟಾರಿನ ಮನೆಗೆ ಭೇಟಿ ನೀಡಿ ಕುಟುಂಬಸ್ಥರನ್ನು ಸಂತೈಸಿದ್ದಾರೆ‌.

ಸಂಜೆ 4.30 ಕ್ಕೆ ಮಂಗಳೂರಿನಿಂದ ಹೊರಟ ಸಿಎಂ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿದ್ದು, ಗೃಹ ಸಚಿವ ಅರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಮುಖಂಡರು ಜೊತೆಗಿದ್ದರು. ಈ ನಡುವೆ ವಿವಿಧ ನಾಯಕರು ಮನೆ ಕಟ್ಟಿ ಕೊಡುವ ಭರವಸೆಯನ್ನು ಕುಟುಂಬಸ್ಥರಿಗೆ ನೀಡಿದ್ದಾರೆ. ಗುರುವಾರ ಅಪರಾಹ್ನ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದರು.

Also Read  ಬ್ಲಾಕ್ ಫಂಗಸ್‍ಗೆ ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚುವರಿ ಔಷಧ ಪೂರೈಕೆ ➤ ಡಿವಿಎಸ್

 

error: Content is protected !!
Scroll to Top