ಮೃತ ಪ್ರವೀಣ್ ಮನೆಯವರಿಗೆ ಸಾಂತ್ವನ ಹೇಳಿದ ಸಿಎಂ ಬೊಮ್ಮಾಯಿ ➤ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು.24. ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಕೇವಲ ಕೊಲೆಯಲ್ಲ, ಇದೊಂದು ದೇಶ ದ್ರೋಹದ ಕೃತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ಮೃತ ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಬಳಿಕ ನೆಟ್ಟಾರಿನಲ್ಲಿ ಮಾತನಾಡಿ ಸಿಎಂ, ಎಲ್ಲಾ ದೃಷ್ಟಿಕೋನಗಳಿಂದಲೂ ತನಿಖೆಯಾಗುತ್ತಿದ್ದು, ಅತೀ ಶೀಘ್ರದಲ್ಲಿ ಅರೋಪಿಗಳ ಬಂಧನವಾಗಲಿದೆ ಎಂದರು. ಅಗತ್ಯ ಬಿದ್ದರೆ ಪ್ರವೀಣ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಲಾಗುವುದು ಎಂದ ಅವರು ಹತ್ಯೆಗೆ ಬೆಂಬಲ ಕೊಟ್ಟವರ ವಿರುದ್ಧವೂ ಕ್ರಮ ಜರುಗಿಸಲಿದ್ದೇವೆ. ಮೃತ ಪ್ರವೀಣ್ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ.ಗಳ ಚೆಕ್ ವಿತರಿಸಲಾಗಿದೆ ಎಂದವರು ತಿಳಿಸಿದ್ದಾರೆ.

Also Read  ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ 30 ಜನರು ಆತ್ಮಹತ್ಯೆ: ಆರ್.ಅಶೋಕ್

 

error: Content is protected !!
Scroll to Top