ಫಾಝಿಲ್ ಹತ್ಯೆಯ ಹಿನ್ನೆಲೆ ➤ ಕೆಲವು ಪ್ರದೇಶಗಳಲ್ಲಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.29. ಮಂಗಳೂರಿನ ಹೊರವಲಯದ ಸುರತ್ಕಲ್ ನಲ್ಲಿ ರಾತ್ರಿ ವೇಳೆ ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಹಿನ್ನೆಲೆಯಲ್ಲಿ ಮಂಗಳೂರು ಪರಿಸರದ ಕೆಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

ಸುರತ್ಕಲ್ ನಲ್ಲಿ ಗುರುವಾರ ರಾತ್ರಿ ಫಾಝಿಲ್ ಎಂಬಾತನನ್ನು ಕೊಲೆಗೈಯಲಾಗಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸುರತ್ಕಲ್, ಮುಲ್ಕಿ, ಬಜಪೆ ಹಾಗೂ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಜೆ ಘೋಷಿಸುವಂತೆ ಪೊಲೀಸ್ ಕಮಿಷನರ್ ನೀಡಿದ ಮನವಿಯಂತೆ ಜಿಲ್ಲಾಧಿಕಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.

Also Read  ಇಬ್ಬರು ಪುತ್ರಿಯರ ಜೊತೆ ಮಹಿಳೆ ನಾಪತ್ತೆ

 

error: Content is protected !!
Scroll to Top