ಪ್ರವೀಣ್ ಹತ್ಯೆ ಪ್ರಕರಣದ ಮೂರನೇ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 29. ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತನನ್ನು ಚಿಕನ್ ಸೆಂಟರ್ ಹೊಂದಿದ್ದ ಸದ್ದಾಂ ಎಂದು ಗುರುತಿಸಲಾಗಿದೆ. ಈತನನ್ನು ಕಾಣಿಯೂರಿನಲ್ಲಿ ವಶ ಪಡಿಸಿಕೊಂಡ ಬಗ್ಗೆ ವರದಿಯಾಗಿದೆ. ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಗುರುವಾರದಂದು ಬೆಳ್ಳಾರೆಯ ಶಫೀಕ್‌ (27) ಮತ್ತು ಸವಣೂರಿನ ಝಾಕೀರ್‌ (29) ಎಂಬವರನ್ನು ಬಂಧಿಸಿದ್ದರು. ಆರೋಪಿಗಳನ್ನು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Also Read  ನಾಲ್ಕು ಮಕ್ಕಳಿಗೆ ಜನ್ಮ‌ ನೀಡಿದ ಮಹಿಳೆ ➤ ಮಲೆನಾಡಿನಲ್ಲೊಂದು ಅಚ್ಚರಿಯ ಘಟನೆ

error: Content is protected !!
Scroll to Top