ಬೆಳ್ತಂಗಡಿ: ಅಕ್ರಮವಾಗಿ ದಾಸ್ತಾನಿರಿಸಿದ್ದ ಗೋಡೌನ್ ಮೇಲೆ ತಹಶೀಲ್ದಾರ್ ದಾಳಿ ➤ ಆರೋಪಿ ಸಹಿತ 37.5 ಕ್ವಿಂಟಾಲ್ ಅಕ್ಕಿ ವಶ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು. 29. ಅಕ್ರಮವಾಗಿ ಪಡಿತರ ಅಕ್ಕಿ ದಾಸ್ತಾನು ಮಾಡಿ ವಾಹನದಲ್ಲಿ ಸಾಗಿಸಲೆತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಹಾಗೂ ಆಹಾರ ಇಲಾಖಾ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಆರೋಪಿಗಳ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ತಾಲೂಕಿನ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.


ಬಂಧಿತನನ್ನು ವಾಹನ ಚಾಲಕ ಹಾಸನ ಜಿಲ್ಲೆಯ ಲಕ್ಷ್ಮೀಪುರ ನಿವಾಸಿ ನಂದೀಶ್ ಎಂದು ಗುರುತಿಸಲಾಗಿದೆ. ಅಲ್ಲದೇ ಈ ಸಂದರ್ಭದಲ್ಲಿ ಗೋಡೌನ್ ನಲ್ಲಿ 14.5 ಕೆಜಿ ಪಡಿತರ ಅಕ್ಕಿ ಮತ್ತು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ತುಂಬಿಸಿಟ್ಟ 23ಕ್ವಿಂಟಾಲ್ ಅಕ್ಕಿ, ತೂಕದ ಯಂತ್ರ ಪತ್ತೆಯಾಗಿದ್ದು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಆಹಾರ ನಿರೀಕ್ಷಕ ಪೂಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Scroll to Top