ಭಾರೀ ಮಳೆ- ಮುಳುಗಿದ ಮಂಗಳೂರು ➤ ಇಂದು ನಗರದಾದ್ಯಂತ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 30. ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವು ರಸ್ತೆಗಳು ಮಳೆ ನೀರಿನಿಂದ ಜಲಾವೃತವಾಗಿವೆ. ಪ್ರಮುಖವಾಗಿ ನಗರದ ಪಂಪ್ ವೆಲ್, ಪಡೀಲ್ ಭಾಗದಲ್ಲೂ ನೀರು ನುಗ್ಗಿ ಸಂಚಾರ ಅಸ್ತವ್ಯಸ್ತವಾಗಿದೆ. ಅವೈಜ್ಞಾನಿಕ ಕಾಮಗಾರಿಯಿಂದಾಗಿ ಪದೇ ಪದೇ ಪಂಪ್ ವೆಲ್‌, ಪಡೀಲ್ ಮುಳುಗಡೆಯಾಗುತ್ತಿದ್ದು, ಈ ಬಗ್ಗೆ ಶಾಸಕರು, ಸಂಸದರು ಇನ್ನು ಕ್ರಮ ಕೈಗೊಂಡಿಲ್ಲ. ಮಳೆಯಿಂದಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಕೆವಿ ರಾಜೇಂದ್ರ ಜು.30 ರ ಶನಿವಾರ ರಜೆ ಘೋಷಿಸಿದ್ದಾರೆ.

ಇಂದು ಮುಂಜಾನೆಯೇ ಮಂಗಳೂರು, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ, ಮೂಲ್ಕಿಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ್ದರು. ಇನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಸ್ಥಳೀಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮನವಿಯಂತೆ ಪುತ್ತೂರು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜು.30 ಕ್ಕೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ಅವರು ತಿಳಿಸಿದ್ದಾರೆ.

error: Content is protected !!

Join the Group

Join WhatsApp Group