ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರು ಕಾರ್ಕಳದಲ್ಲಿ ಪತ್ತೆ ➤ ಕಾರು ಮಾಲಕ ಸೇರಿದಂತೆ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ನಗರದ ಹೊರವಲಯದ ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆಯಲ್ಲಿ ಬಳಸಲಾದ ಕಾರನ್ನು ಪತ್ತೆ ಹಚ್ಚಿರುವ ಮಂಗಳೂರು ಪೊಲೀಸರು ಕಾರು ಮಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಕಾರು ಮಾಲಕ ಅಜಿತ್ ಎಂಬಾತನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದಲ್ಲಿ ನೇರವಾಗಿ ಭಾಗಿಯಾದವರ ಮಾಹಿತಿಯನ್ನು ಕಲೆ‌ಹಾಕಿದ್ದಾರೆ. ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಹತ್ಯೆಗೆ ಬಳಸಿದ ಕಾರು ಭಾನುವಾರದಂದು ಕಾರ್ಕಳ ತಾಲೂಕಿನ ಇನ್ನಾ ಗ್ರಾಮದ ನಿರ್ಜನ ಪ್ರದೇಶದಲ್ಲಿ ಕಂಡುಬಂದಿದ್ದು, ಮಂಗಳೂರು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.

Also Read  ವಿಶ್ವ ತಂಬಾಕು ರಹಿತ ದಿನಾಚರಣೆ

 

error: Content is protected !!
Scroll to Top