ಕರಾವಳಿಯಲ್ಲಿ ಮತ್ತೆ ಎರಡು ದಿನಗಳ ಕಾಲ ರಾತ್ರಿ ನಿಷೇಧಾಜ್ಞೆ ಮುಂದುವರಿಕೆ ➤ ಬೆಳಿಗ್ಗೆ 6 ರಿಂದ ಸಂಜೆ 6ರ ವರೆಗೆ ವ್ಯಾಪಾರ ಮಾಡಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ದ.ಕ.ಜಿಲ್ಲಾದ್ಯಂತ ಮತ್ತೆ ಎರಡು ದಿನ ರಾತ್ರಿ ನಿಷೇಧಾಜ್ಞೆ‌ ಮುಂದುವರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಇತ್ತೀಚಿಗೆ ಬೆಳ್ಳಾರೆ ಮತ್ತು ‌ಮಂಗಳಪೇಟೆಯಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಸಂಜೆ 6ರಿಂದ ಮುಂಜಾನೆ 6ರವರೆಗೆ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ನಿರ್ಬಂಧ ಹೇರಲಾಗಿತ್ತು. ಇದೀಗ ಮಂಗಳೂರು ನಗರ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ‌ ಮನವಿಯ ಮೇರೆಗೆ ಜಿಲ್ಲಾದ್ಯಂತ ಎರಡು ದಿನ ರಾತ್ರಿ ನಿಷೇಧಾಜ್ಞೆ‌ ಮುಂದುವರಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Also Read  ಸಂತ್ರಸ್ಥೆ ವಿದ್ಯಾರ್ಥಿನಿ ಹೇಳಿಕೆ ದಾಖಲಿಸಿಕೊಂಡ ಸಿಐಡಿ    

 

error: Content is protected !!
Scroll to Top