ಪುತ್ತೂರು: ಜ್ಯೂಸ್ ಅಂಗಡಿಯಲ್ಲಿ ಅಗ್ನಿ ಅವಘಡ ➤ ಪೊಲೀಸ್, ಗೃಹರಕ್ಷಕ ಸಿಬ್ಬಂದಿಯಿಂದ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 01. ಇಲ್ಲಿನ ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿದ್ದ ಜ್ಯೂಸ್ ಸೆಂಟರ್ ವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.

ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು ಹೊಗೆ ಆವರಿಸಿತ್ತು. ಈ ವೇಳೆ ರಾತ್ರಿ ಬಸ್ ನಿಲ್ದಾಣದ ಕರ್ತವ್ಯದಲ್ಲಿದ್ದ ಪುತ್ತೂರು ನಗರ ಪೊಲೀಸ್ ಠಾಣಾ ಸಿಬ್ಬಂದಿ ಭೀಮ್ ಸೇನ್ ಮತ್ತು ಗೃಹರಕ್ಷಕದಳದ ಸಿಬ್ಬಂದಿ ಸುದರ್ಶನ್ ಹೊಗೆ ಬರುವುದನ್ನು ಗಮನಿಸಿ ಪರಿಶೀಲಿಸಿದಾಗ ಜ್ಯೂಸ್ ಸೆಂಟರ್ ಅಂಗಡಿಗೆ ಬೆಂಕಿ ತಗಲಿರುವುದು ತಿಳಿದು ಬಂದಿದೆ. ಕೂಡಲೇ ಮಾಹಿತಿಯನ್ನು ರಾತ್ರಿ ರೌಂಡ್ಸ್ ನಲ್ಲಿದ್ದ ಎ.ಎಸ್.ಐ ಚಕ್ರಪಾಣಿ ಮತ್ತು ಅಗ್ನಿಶಾಮಕ ದಳದವರಿಗೂ ಮಾಹಿತಿ ನೀಡಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕದಳದವರು ಬಂದು ಜ್ಯೂಸ್ ಸೆಂಟರ್ ಶಟರ್ ಬೀಗ ಒಡೆದು ಒಳಗೆ ಬೆಂಕಿ ಹತ್ತಿಕೊಂಡಿದ್ದ ಅಡುಗೆ ಅನಿಲವನ್ನು ಸ್ಟೌವ್ ನಿಂದ ಪ್ರತ್ಯೇಕಗೊಳಿಸಿ ಬೆಂಕಿಯ ಜ್ವಾಲೆಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

Also Read  ➤ ದಾವುದ್ ಇಬ್ರಾಹಿಂ ಗೆ ಗುಟ್ಕಾ ಉತ್ಪಾದಕ ಘಟಕ ಸ್ಥಾಪಿಸಲು ನೆರವು ➤ ಮೂವರು ಉದ್ಯಮಿಗಳಿಗೆ 10 ವರ್ಷ ಜೈಲು!

error: Content is protected !!
Scroll to Top