ಸುಳ್ಯ: ಭಾರೀ ಮಳೆ- ಭೂಕುಸಿತ ➤ ಆತಂಕದಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 01. ನಿನ್ನೆ ಸುರಿದ ಭಾರೀ ಮಳೆಗೆ ಸುಳ್ಯ ತಾಲೂಕಿನ ಕಲ್ಮಕಾರಿನ ಕಡಮಕಲ್ಲು ಕಾಡಿನ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿರುವ ಘಟನೆ ವರದಿಯಾಗಿದೆ.

ಘಟನೆಯಿಂದಾಗಿ ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿದೆ. ಅಲ್ಲದೇ ಕೃಷಿ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಕೃಷಿ ಹಾನಿಯಾದ ಘಟನೆಯೂ ನಡೆದಿದೆ. ತೋಡಿನಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿರುವುದಾಗಿ ತಿಳಿದು ಬಂದಿದೆ. ಜನತೆ ಆತಂಕಗೊಂಡಿದ್ದಾರೆ.

 

Scroll to Top