ಸರಣಿ ಹತ್ಯೆ ಹಿನ್ನೆಲೆ ➤ ದ.ಕ ಜಿಲ್ಲೆಗೆ ದೌಡಾಯಿಸಿದ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಜಿಲ್ಲೆಯಲ್ಲಿ ನಡೆದ ಸರಣಿ ಹತ್ಯೆ ಹಿನ್ನೆಲೆ ಜಿಲ್ಲೆಗೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್ ದೌಡಾಯಿಸಿದ್ದಾರೆ.

ಮಂಗಳೂರಿನಲ್ಲಿ ಅಧಿಕಾರಿಗಳ ಜೊತೆ ಪ್ರವೀಣ್ ಸೂದ್ ಮಾತುಕತೆ ನಡೆಸಿದ್ದು, ಪ್ರವೀಣ್ ನೆಟ್ಟಾರು, ಫಾಝಿಲ್‌ ಹಾಗೂ ಮಸೂದ್‌ ಹತ್ಯೆ ತನಿಖೆಯ ಪ್ರಗತಿ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ದ.ಕ ಜಿಲ್ಲೆಯು ಬೂದಿ ಮುಚ್ಚಿದ ಕೆಂಡದಂತೆ ಇರುವುದರಿಂದ ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಮತ್ತು ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆಯ ಕುರಿತು ಪ್ರವೀಣ್ ಸೂದ್ ಮಾಹಿತಿ ಪಡೆದುಕೊಂಡರು. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಷ್ ಸೋನಾವಣೆ, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಸಹಿತ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Also Read  ಕಡಬ: ರೈಲಿನಲ್ಲಿ ಮಹಿಳೆಯ ಸರಕಳ್ಳತನಕ್ಕೆ ಯತ್ನ ➤ ಆರೋಪಿಯ ಬಂಧನ

error: Content is protected !!
Scroll to Top