ಸುಬ್ರಹ್ಮಣ್ಯ: ಪರ್ವತಮುಖಿಯಲ್ಲಿ ಮನೆಯ ಮೇಲೆ ಗುಡ್ಡ ಕುಸಿತ ➤ ಮಣ್ಣಿನಡಿ ಸಿಲುಕಿದ ಮನೆಮಂದಿ, ಮಣ್ಣು ತೆರವು ಕಾರ್ಯಾಚರಣೆ ಆರಂಭ



(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಕುಕ್ಕೇ ಸುಬ್ರಹ್ಮಣ್ಯದಲ್ಲಿ ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಕುಮಾರಧಾರ ಬಳಿಯ ಪರ್ವತಮುಖಿ ಎಂಬಲ್ಲಿ ಮನೆಯೊಂದರ ಮೇಲೆ ಗುಡ್ಡ ಜರಿದು ಬಿದ್ದ ಪರಿಣಾಮ ಮನೆ ಮಂದಿ ಮಣ್ಣಿನಡಿ ಸಿಲುಕಿದ ಘಟನೆ ಸೋಮವಾರ ರಾತ್ರಿ ನಡೆದಿದೆ.







ಸೋಮವಾರ ಸಂಜೆಯಿಂದ ಭಾರೀ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಮನೆಯ ಹಿಂಬದಿಯ ಗುಡ್ಡ ಏಕಾಏಕಿ ಮನೆಯ ಮೇಲೆ ಕುಸಿದು ಬಿದ್ದಿದೆ. ಮನೆಯಲ್ಲಿ ಇಬ್ಬರು ಮಕ್ಕಳು, ಓರ್ವ ವೃದ್ಧೆ ಸಹಿತ ನಾಲ್ಕೈದು ಮಂದಿ ವಾಸಿಸುತ್ತಿದ್ದು, ಅವರೆಲ್ಲರೂ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ಆರಂಭಗೊಂಡಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






 

error: Content is protected !!
Scroll to Top