ಬೀಚ್ ಗೆ ತೆರಳಿದ್ದ ವಿದ್ಯಾರ್ಥಿನಿಯ ಅತ್ಯಾಚಾರ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 01. ಕಾಲೇಜು ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನ ಎನ್ ಐಟಿಕೆ ಬೀಚ್ ಬಳಿ ನಡೆದಿದೆ.

ಬಂಧಿತನನ್ನು ಮುನಾಝ್ ಅಹಮ್ಮದ್(30) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಜುಲೈ 27 ರಂದು ಎನ್ ಐಟಿಕೆ ಬೀಚ್ ಗೆ ತನ್ನ ಸಹಪಾಠಿಯೊಂದಿಗೆ ಬಂದಿದ್ದು, ಇದನ್ನು ಕಂಡ ಮುನಾಝ್ ಅಹಮದ್ ವಿದ್ಯಾರ್ಥಿನಿಯ ಸಹಪಾಠಿಯನ್ನು ಹೆದರಿಸಿ ಓಡಿಸಿದ್ದಾನೆ. ಆ ಬಳಿಕ ವಿದ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ್ದಾನೆ ಎನ್ನಲಾಗಿದೆ. ಅತ್ಯಾಚಾರದ ವೀಡಿಯೋ ವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿ ವಿದ್ಯಾರ್ಥಿನಿಗೆ ತೋರಿಸಿ ಕಿರುಕುಳ ನೀಡಲು ಆರಂಭಿಸಿದ್ದ. ಈ ಕುರಿತು ಸಂತ್ರಸ್ತ ವಿದ್ಯಾರ್ಥಿನಿಯು ಪೊಲೀಸ್ ಕಮೀಷನರ್ ಭೇಟಿ ಮಾಡಿ ನಡೆದ ಘಟನೆಯ ಬಗ್ಗೆ ದೂರು ನೀಡಿದ್ದಳು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Also Read  ಸಾಲಭಾದೆ ತಾಳಲಾರದೆ ಆತ್ಮಹತ್ಯೆಗೆ ಶರಣು..!

 

error: Content is protected !!
Scroll to Top