ಭೀಕರ ಮಳೆ ➤ ಇಂದು ಕಡಬ, ಸುಳ್ಯ ತಾಲೂಕಿನ ಶಾಲೆಗಳಿಗೆ ರಜೆ ಘೊಷಣೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 02. ದ.ಕ ಜಿಲ್ಲೆಯ ವಿವಿಧ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಅದರಲ್ಲೂ ಸುಬ್ರಹ್ಮಣ್ಯ ಕಲ್ಮಕಾರು , ಕೊಲ್ಲಮೊಗ್ರು, ಹರಿಹರ, ಬಾಳುಗೋಡು ಐನೆಕಿದು ಗ್ರಾಮದಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, ಜಳಪ್ರಳಯವೇ ಸಂಭವಿಸಿದೆ.


ಭಾರೀ ಮಳೆ ಮುಂದುವರಿದ ಪರಿಣಾಮ ನದಿ , ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸುಳ್ಯ ಹಾಗೂ ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲಾ ಕಾಲೇಜು ಗಳಿಗೆ ಆ. 2 ರಂದು ಜಿಲ್ಲಾಧಿಕಾರಿ ಡಾ. ಕೆವಿ . ರಾಜೇಂದ್ರ ರಜೆ ಘೋಷಣೆ ಮಾಡಿದ್ದಾರೆ. ಮಳೆಯ ಭೀಕರತೆಗೆ ಕಲ್ಮಕಾರು , ಕೊಲ್ಲ ಮೊಗ್ರು, ಹರಿಹರ ಹಾಗೂ ಬಾಳುಗೋಡು ಈ ನಾಲ್ಕು ಗ್ರಾಮಗಳು ಸಂಪೂರ್ಣ ಸಂಪರ್ಕ ಕಡಿತಗೊಂಡಿದೆ.

Also Read  ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ ಪ್ರಶಸ್ತಿಗೆ ಡಾ.ವೀರೇಂದ್ರ ಹೆಗ್ಗಡೆ ಆಯ್ಕೆ

error: Content is protected !!
Scroll to Top