(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜು. 30. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ಎಂಬವರ ಹತ್ಯೆಯನ್ನು ಖಂಡಿಸಿ, ವಿಶ್ವ ಹಿಂದೂ ಪರಿಷತ್, ಬಜರಂಗದಳದ ವತಿಯಿಂದ ಹಿರೇಬೈಲ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಗಿರೀಶ್ ಹೆಮ್ಮಕ್ಕಿ ಎಂಬಾತ ಮೀನು ಮಾರಾಟಗಾರರಿಗೆ ಹಾಗೂ ಮುಸ್ಲಿಂ ಸಮುದಾಯಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೋಮು ಭಾವನೆ ಕೆರಳಿಸಿ, ಕೋಮು ಗಲಭೆಗೆ ಪ್ರಚೋದಿಸುವ ಯತ್ನ ನಡೆಸಿರುವುದನ್ನು ವಿರೋಧಿಸಿ ಈತನ ವಿರುದ್ಧ ಹಾಗೂ ಪ್ರತಿಭಟನೆಯ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ SDPI ಮೂಡಿಗೆರೆಯ ಪ್ರಧಾನ ಕಾರ್ಯದರ್ಶಿ ಶರೀಫ್ ಎಂ.ಯು ರವರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ದೂರನ್ನು ನೀಡಿದ್ದಾರೆ.
ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ➤ SDPI ಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ(SP) ದೂರು
