ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಮತ್ತಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ. 02. ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಇನ್ನಿಬ್ಬರು ಆರೋಪಿಗಳ ಬಂಧನವಾಗಿದ್ದು, ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ.


ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ ಸದ್ದಾಂ ( 32) ಮತ್ತು ಹ್ಯಾರಿಸ್ (42) ಎಂದು ಗುರುತಿಸಲಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಫೀಕ್ ಮತ್ತು ಜಾಕೀರ್ ಎಂಬಿಬ್ಬರನ್ನು ಜುಲೈ 28ರಂದು ಪೊಲೀಸರು ಬಂಧಿಸಿದ್ದರು. ಅಲ್ಲದೇ ಇಬ್ಬರನ್ನೂ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದ್ದು, ತನಿಖೆ ವೇಳೆ ಲಭಿಸಿದ ಮಾಹಿತಿಯಾಧರಿಸಿ ಈಗಾಗಲೇ ಹಲವರನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಈ ಪ್ರಕರಣದ ಸಂಬಂಧ ಇನ್ನೂ ಇಬ್ಬರನ್ನು ಬಂಧಿಸಲಾಗಿದೆ.

Also Read  SSLC ಫಲಿತಾಂಶ ಪ್ರಕಟ !!! ➤ ಚಿತ್ರದುರ್ಗ ಜಿಲ್ಲೆ ಪ್ರಥಮ, ದಕ್ಷಿಣ ಕನ್ನಡಕ್ಕೆ 19ನೇ ಸ್ಥಾನ

error: Content is protected !!
Scroll to Top