ಫಾಝಿಲ್ ಕೊಲೆ ಪ್ರಕರಣ ➤ 6 ಮಂದಿ ಸೆರೆ- ಕಮಿಷನರ್ ಶಶಿಕುಮಾರ್

(ನ್ಯೂಸ್ ಕಡಬ) newskadaba.com ಸುರತ್ಕಲ್, ಆ. 02. ಕಳೆದ ವಾರ ನಡೆದ ಫಾಝಿಲ್ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಆರು ಮಂದಿ ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಈ ವೇಳೆ ಮಾತನಾಡಿದ ಕಮಿಷನರ್ ಶಶಿಕುಮಾರ್, ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲಾಗಿದೆ. ವಿಚಾರಣೆಯ ವೇಳೆ ಆರೋಪಿಗಳು ಎಸಗಿದ ಕೃತ್ಯವನ್ನು ಒಪ್ಪಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು. ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಬಳಸಿದ್ದ ಕಾರಿನ ನೋಂದಣಿ ಸಂಖ್ಯೆ ಪತ್ತೆಹಚ್ಚಿ, ಅದರ ಮಾಲಕ ಅಜಿತ್ ಕ್ರಾಸ್ತಾ ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆತ ಹೆಚ್ಚುವರಿ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ. ಆತನ ಮಾಹಿತಿಯಂತೆ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

Also Read  ಮೆಲ್ಕಾರ್: ಬುಡ ಸಮೇತ ನೆಲಕ್ಕುರುಳಿದ ಬೃಹತ್ ಗಾತ್ರದ ಮರ ► ಓರ್ವ ಮೃತ್ಯು, ಇನ್ನೋರ್ವ ಗಂಭೀರ

error: Content is protected !!
Scroll to Top