ಆ. 04ರಂದು ಗೃಹಸಚಿವ ಅಮಿತ್ ಶಾ ಕರ್ನಾಟಕ ಪ್ರವಾಸ ➤ ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ಸಾಧ್ಯತೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 02. ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರದಂದು ಕರ್ನಾಟಕಕ್ಕೆ ಆಗಮಿಸುತ್ತಿದ್ದು, ಹತ್ಯೆಗೀಡಾದ ಬಿಜೆಪಿ ಯುವಮುಖಂಡ ಪ್ರವೀಣ್ ನೆಟ್ಟಾರು ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಸ್ಟ್ 4ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ಈ ಬಗ್ಗೆ ರಾಜ್ಯ ಘಟಕದ ಬಳಿ ಯಾವುದೇ ಮಾಹಿತಿಯಿಲ್ಲ. ಕೇಂದ್ರ ಗೃಹ ಸಚಿವರ ಯಾವುದೇ ಕಾರ್ಯಕ್ರಮ ಸದ್ಯಕ್ಕೆ ಇಲ್ಲ. ಅವರು ಆಗಮಿಸುವ ಮಾಹಿತಿಯೂ ಇಲ್ಲ ಎಂದು ರಾಜ್ಯ ಪದಾಧಿಕಾರಿಗಳು ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಇನ್ನು ಅಮಿತ್ ಶಾ ರಾಜ್ಯಕ್ಕೆ ಬರುವ ಕಾರ್ಯಕ್ರಮ ಮೊದಲೇ ನಿಗದಿಯಾಗಿರುತ್ತದೆ. ಆದರೆ ಈ ಬಾರಿ ಮಾತ್ರ ರಾಜ್ಯ ನಾಯಕರಿಗೆ ಮಾಹಿತಿ ನೀಡದೇ ಹೈಕಮಾಂಡ್ ದಿಢೀರ್ ಆಗಿ ನಿಗದಿಪಡಿಸಿದೆ.

Also Read  ಎಪ್ರಿಲ್ 20 ರ ನಂತರ ಲಾಕ್‌ಡೌನ್ ಸಡಿಲಿಕೆಗೆ ತೀವ್ರ ವಿರೋಧದ ಹಿನ್ನೆಲೆ ➤ ಸರಕಾರದಿಂದ ಲಾಕ್‌ಡೌನ್ ಸಡಿಲಿಕೆ ಆದೇಶ ವಾಪಸ್..!!

error: Content is protected !!
Scroll to Top