ಹೊಸ್ಮಠ: ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿ ಬೆಂಕಿಗಾಹುತಿ ► ಲಕ್ಷಾಂತರ ರೂ. ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ನ.14. ಇಲ್ಲಿನ ಹೊಸ್ಮಠ ಬಸ್ ನಿಲ್ದಾಣದ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಸುಗುಣಾ ದಯಾನಂದ ಎಂಬವರ ಫ್ಯಾನ್ಸಿ ಮತ್ತು ಟೈಲರಿಂಗ್ ಅಂಗಡಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳವಾರ ಬೆಳಗ್ಗಿನ ಜಾವ ನಡೆದಿದೆ.

ಘಟನೆಯಲ್ಲಿ ಕುಟ್ರುಪ್ಪಾಡಿ ಗ್ರಾಮ ಪಂಚಾಯತಿಯ ಕೇಂದ್ರ ಗ್ರಂಥಾಲಯ ಹಾಗೂ ಫ್ಯಾನ್ಸಿ ಅಂಗಡಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಂಗಡಿಯಲ್ಲಿದ್ದ ಟೈಲರಿಂಗ್ ಮೆಷಿನ್,   ಮದುವೆ ಸಮಾರಂಭಗಳ ಕೃತಕ ಆಭರಣಗಳು, ಅಗತ್ಯ ದಾಖಲೆ ಪತ್ರಗಳು ಸೇರಿದಂತೆ ಲಕ್ಷಾಂತರ ರೂ. ನಷ್ಟ ಅಂದಾಜಿಸಲಾಗಿದೆ.

ಘಟನೆಗೆ ನಿಖರವಾದ ಕಾರಣವೇನೆಂದು ತಿಳಿದುಬಂದಿಲ್ಲ. ಮಂಗಳವಾರ ಬೆಳಿಗ್ಗೆ ಸ್ಥಳೀಯರು ಪೇಟೆಗೆ ಬಂದಾಗ ಅಂಗಡಿಯು ಹೊತ್ತಿ ಉರಿಯುತ್ತಿರುವುದು ಕಂಡು ಬಂದಿದೆ.

Also Read  ಆಲಂಕಾರು: ಶ್ರೀ ದುರ್ಗಾಂಬ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಟಾಟಿನೆ

ಸ್ಥಳಕ್ಕೆ ಕಡಬ ಠಾಣಾ ಉಪ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಮೆಸ್ಕಾಂ ಜೆಇ ನಾಗರಾಜ್, ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೋಡ್ರಿಗಸ್, ಸ್ಥಳೀಯ ಜನಪ್ರತಿನಿಧಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

error: Content is protected !!
Scroll to Top