ವಿಟ್ಲ: ಯುವಕ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 04. ಮನೆಯಲ್ಲೇ ನೇಣುಬಿಗಿದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಟ್ಲ ಶಿವಾಜಿನಗರದ ನೆಕ್ಕರೆಕಾಡು ನಿವಾಸಿ ಸುರೇಶ್ ಎಂದು ಗುರುತಿಸಲಾಗಿದೆ. ಈತ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ತಕ್ಷಣವೇ ವಿಟ್ಲ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಶೀಲಿಸಿದ ವೈದ್ಯರು ಅದಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Scroll to Top