ಬೈಕ್ ಸವಾರರಿಗೆ ಶಾಕಿಂಗ್ ನ್ಯೂಸ್ ➤ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 04. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶವಿಲ್ಲ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

ಹದಿನೆಂಟು ವರ್ಷದ ಕೆಳಗಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಮಹಿಳೆಯರಿಗೆ ಈ ನಿಯಮದಿಂದ ರಿಯಾಯಿತಿ ನೀಡಲಾಗಿದೆ. ಕೇವಲ ಪುರುಷ ಹಿಂಬದಿ ಸವಾರರಿಗೆ ಮಾತ್ರ ಈ ನಿಯಮ ಅನ್ವಯಿಸಲಿದೆ. ಮುಂದಿನ ಒಂದು ವಾರದ ಮಟ್ಟಿಗೆ ಜಿಲ್ಲೆಯಲ್ಲಿ ಈ ನಿಯಮವನ್ನು ಪಾಲನೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಕೆಲವು ಬಾರಿ ಹಿಂಬದಿ ಸವಾರರು ಸಮಸ್ಯೆಯನ್ನು ಉಂಟು ಮಾಡ್ತಾರೆ. ಬೇರೆ ರಾಜ್ಯದಲ್ಲೂ ಈ ನಿಯಮ ಜಾರಿಗೆ ತಂದು, ಎಲ್ಲಾ ಪುರುಷ ಹಿಂಬದಿ ಸವಾರರಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸಲು ಅವಕಾಶ ನಿರಾಕರಿಸಲಾಗಿತ್ತು. ಇಲ್ಲಿ ಮಹಿಳೆಯರು, ಹಿರಿಯ ನಾಗರಿಕರು,ಮಕ್ಕಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಎರಡು ವಾರಗಳ ಅಂತರದಲ್ಲಿ ಜಿಲ್ಲೆಯಲ್ಲಿ ಮೂರು ಯುವಕರ ಹತ್ಯೆಯಾಗಿದ್ದು, ಆ ಬಳಿಕ ಇಲ್ಲಿನ ಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ಇದನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ ನೈಟ್‌ ಕರ್ಫ್ಯೂ ಜಾರಿಗಳಿಸಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟು, ವಾಣಿಜ್ಯ ವ್ಯವಹಾರಗಳನ್ನು ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಲಾಗಿದೆ. ಅಲ್ಲದೆ ಕಳೆದ 10 ದಿನದಿಂದ ಮಧ್ಯ ಮಾರಾಟಕ್ಕೂ ಜಿಲ್ಲೆಯಲ್ಲಿ ನಿಷೇಧ ಹೇರಲಾಗಿದೆ.

error: Content is protected !!

Join the Group

Join WhatsApp Group