ಮಂಗಳೂರು: ಎಡೆಬಿಡದೆ ಸುರಿಯುತ್ತಿರುವ ಮಳೆ ➤ ಜನಜೀವನ ಅಸ್ತವ್ಯಸ್ತ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಕಳೆದ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಮಂಗಳೂರು ನಗರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 06ರ ವರೆಗೆ ಹವಾಮಾನ ಇಲಾಖೆಯು ರೆಡ್ ಅಲರ್ಟ್ ಘೋಷಿಸಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಇಂದು ಬೆಳ್ಳಗ್ಗೆಯಿಂದ ಭಾರೀ ಗಾಳಿ ಸಹಿತ ಮಳೆಯಾಗುತ್ತಿದ್ದು, ನಗರದ ಕೆಲವು ರಸ್ತೆಗಳೆಲ್ಲಾ ಮಳೆ ನೀರಿನಿಂದ ಆವೃತ್ತವಾಗಿದೆ. ಹವಾಮಾನ ಇಲಾಖೆಯು 6ರವರೆಗೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಗಾಳಿ ಯಾಗಿರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೂ ಎಚ್ಚರಿಕೆ ನೀಡಲಾಗಿದೆ.

Also Read  ರಾತ್ರಿ ಹೊತ್ತು ಕರ್ತವ್ಯ ನಿರ್ವಹಿಸುವ ಮಹಿಳಾ ವೈದ್ಯರ ಜೊತೆ ಮಹಿಳಾ ಸಿಬ್ಬಂದಿ ಕಡ್ಡಾಯ- ಆದೇಶ

error: Content is protected !!