ಇನ್ಮುಂದೆ ಶಿರಾಡಿ ಘಾಟ್ ನಲ್ಲಿ ರಾತ್ರಿ ವೇಳೆ ಬಸ್ ಸಂಚಾರಕ್ಕೆ ಅವಕಾಶ ➤ ನಿರ್ಬಂಧ ಸಡಿಲಿಸಿದ ಹಾಸನ ಡಿ.ಸಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 05. ಮಡಿಕೇರಿ- ಸಂಪಾಜೆ ನಡುವಿನ ಕೊಯನಾಡು ಸಮೀಪ ರಸ್ತೆ ಬಿರುಕು ಬಿಟ್ಟ ಹಿನ್ನೆಲೆ ಈ ರಸ್ತೆಯಲ್ಲಿ ಲಘು ವಾಹನ ಸಂಚಾರ ಹೊರತುಪಡಿಸಿ ಘನ ವಾಹನ ಸಂಚಾರಕ್ಕೆ ಸುರಕ್ಷಿತವಲ್ಲದ ಕಾರಣ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ವಿಧಿಸಿದ್ದ ನಿರ್ಬಂಧವನ್ನು ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಸಡಿಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರ ಮಾರನಹಳ್ಳಿಯಲ್ಲಿ ರಸ್ತೆ ಕುಸಿತಗೊಂಡ ಹಿನ್ನೆಲೆ ದೊಣಿಗಲ್-ಹೆಗ್ಗದ್ದೆವರೆಗಿನ ಶಿರಾಡಿ ಘಾಟ್ ರಸ್ತೆಯಲ್ಲಿ ರಾತ್ರಿ ವೇಳೆ ಘನ ವಾಹನಗಳ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಧಿಕಾರಿಯವರು ಆದೇಶಿಸಿದ್ದರು. ಇದೀಗ ಮಡಿಕೇರಿ-ಸಂಪಾಜೆ ರಸ್ತೆ ಬಿರುಕು ಬಿಟ್ಟಿರುವುದರಿಂದ ಶಿರಾಡಿ ಘಾಟ್‌ನಲ್ಲಿ ಪ್ರಯಾಣಿಕ ಬಸ್‌ಗಳು ರಾತ್ರಿ ವೇಳೆಯೂ ಸಂಚರಿಸಲು ಅನುಮತಿ ನೀಡಲಾಗಿದೆ. ಸಾರ್ವಜನಿಕರು ಖಾಸಗಿ ಹಾಗೂ ಸರ್ಕಾರಿ ಬಸ್‌ಗಳು, ರಾಜಹಂಸ, ಐರಾವತ, ಅಂಬಾರಿ, ಡ್ರೀಮ್ ಕ್ಲಾಸ್ ಸ್ಲೀಪರ್, ನಾನ್ ಎಸಿ ಸ್ಲೀಪರ್, ಸ್ಕ್ಯಾನಿಯಾ, ಮಲ್ಟಿ ಆಕ್ಸೆಲ್ ವೋಲ್ವೊ ಬಸ್‌ಗಳಲ್ಲಿ ರಾತ್ರಿ ವೇಳೆಯೂ ಸಂಚರಿಸಬಹುದಾಗಿದೆ. ದೋಣಿಗಲ್-ಹೆಗ್ಗದ್ದೆ ಮಾರ್ಗದಲ್ಲಿ ಏಕಮುಖ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

Also Read  ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top