ಮೈಸೂರಲ್ಲಿ ಭೀಕರ ಅಪಘಾತ ► ಉಳ್ಳಾಲ ಮೂಲದ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.14. ಇಲ್ಲಿನ ಹುಣಸೂರು ರಸ್ತೆಯಲ್ಲಿ ಸಂಭವಿಸಿದ ಭೀಕರ ಅಪಘಾತವೊಂದರಲ್ಲಿ ಮಂಗಳೂರು ನಗರದ ಉಳ್ಳಾಲ ಮೂಲದ ಮೂವರು ಸಾವನಪ್ಪಿದ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಮೃತರನ್ನು ತೊಕ್ಕೊಟು ಸಮೀಪದ ಉಳ್ಳಾಲದ ಅಬ್ದುಲ್ ಹಮೀದ್(47), ಸಹೋದರ ಮಹಮದ್ ಇಕ್ಬಾಲ್(37) ಹಾಗೂ ಹಮೀದ್ ಪುತ್ರ ಶೇಕ್ ಹಕೀಬ್(18) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಮವಾರ ಸಂಜೆ ಪ್ರವಾಸಕ್ಕೆಂದು ತೊಕ್ಕೊಟ್ಟು ವಿನಿಂದ ಊಟಿಗೆ ಕುಟುಂಬ ಸಮೇತ ತೆರಳುತ್ತಿದ್ದರು. ಈ ವೇಳೆ ಮೈಸೂರಿನ ಬಸರಿಕಟ್ಟೆ ಬಳಿ ಟೆಂಪೋ ಟ್ರಾವೆಲರ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ವಾಹನದಲ್ಲಿದ್ದ ಇತರರಿಗೂ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಂಗಳೂರು ➤ ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಕರೆ

ಘಟನಾ ಸ್ಥಳಕ್ಕೆ ಹುಣಸೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top