ಸಂಪುಟ ವಿಸ್ತರಣೆಗಾಗಿ ದಿಲ್ಲಿಗೆ ಬರುವುದು ಬೇಡ..! ➤ ಅಮಿತ್ ಶಾ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 05. ಸಂಪುಟ ಹಂಚಿಕೆಯ ಕುರಿತು ಅನುಮತಿ ಕೇಳುವುದಕ್ಕಾಗಿ ಯಾರೂ ದಿಲ್ಲಿಗೆ ಬರುವುದು ಬೇಡ. ವಿಸ್ತರಣೆ ಮಾಡುವಾಗ ನಾವೇ ಹೇಳುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಿಎಂ ಬೊಮ್ಮಾಯಿ ಸೇರಿದಂತೆ ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿ ಸಿಎಂ ಬೊಮ್ಮಾಯಿ ಹಾಗೂ ಅವರ ಪ್ರತಿನಿಧಿ ಕಂದಾಯ ಸಚಿವ ಆರ್.ಅಶೋಕ್ ಅವರನ್ನು ಪ್ರತ್ಯೇಕವಾಗಿ ಭೇಟಿ ‌ಮಾಡಿರುವ ಅವರು, ಸಂಪುಟ ವಿಸ್ತರಣೆಗಾಗಿ‌ ಮತ್ತೆ ದಿಲ್ಲಿಗೆ ಬರುವುದು ಬೇಡ. ಒಂದೊಮ್ಮೆ‌ಅಗತ್ಯ ಸೃಷ್ಟಿಯಾದರೆ ನಾವೇ ಆಹ್ವಾನಿಸುತ್ತೇವೆ ಎಂದು ಹೇಳಿದ್ದಾರೆ.

Also Read  "ಯೋಗ್ಯತೆ ಇಲ್ಲ ಅಂದ್ಮೇಲೆ ಸಮವಸ್ತ್ರ ಕಳಚಿಟ್ಟು ಸಾಯಲಿ..!" ➤ ಪೊಲೀಸರ ವಿರುದ್ದ ಕಿಡಿಕಾರಿದ ಸಚಿವ ಆರಗ ಜ್ಞಾನೇಂದ್ರ

ಬಿಜೆಪಿ ಮೂಲಗಳ ಪ್ರಕಾರ ಆ. 15ರ ಬಳಿಕ ಸರಕಾರದ ಮಟ್ಟದಲ್ಲಿ ಭಾರೀ ಬದಲಾವಣೆಯ ನಿರೀಕ್ಷೆಯಿದೆ. ಇದರ ನಡುವೆ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹಠಾತ್ತನೆ ದಿಲ್ಲಿ ಪ್ರವಾಸ ಕೈಗೊಂಡು‌ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿ‌ ಮಾಡಿದ್ದಾರೆ.

error: Content is protected !!
Scroll to Top