ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 06. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತೊಮ್ಮೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಂದಿನ ದೆಹಲಿ ಪ್ರವಾಸ ರದ್ದುಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ ದೆಹಲಿಯ ಪ್ರವಾಸ ರದ್ದಾಗಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

error: Content is protected !!

Join the Group

Join WhatsApp Group