ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಓರ್ವನಿಗೆ ಗಾಯ – News Kadaba

ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ➤ ಓರ್ವನಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಲ್ಕಿ, ಆ. 06. ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ಸಂಭವಿಸಿ, ಓರ್ವ ಗಾಯಗೊಂಡ ಘಟನೆ ಇಲ್ಲಿನ ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಗಾಯಗೊಂಡವನನ್ನು ಮುಲ್ಕಿ ಸಮೀಪದ ಕರ್ನಿರೆ ನಿವಾಸಿ ಸುಜನ್ ಶೆಟ್ಟಿ ಎಂದು ಗುರುತಿಸಲಾಗಿದೆ. ಕಾಲೇಜಿನಲ್ಲಿ ಫಂಕ್ಷನ್ ನಡೆಯುತ್ತಿದ್ದ ಸಂದರ್ಭ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಮಾತಿನ ಚಕಮಕಿ ನಡೆದು, ತಳ್ಳಾಟ ನಡೆದಿದೆ. ಈ ಸಂದರ್ಭ ಒಂದು ಗುಂಪಿನ ಸುಮಾರು ಹತ್ತು ವಿದ್ಯಾರ್ಥಿಗಳ ಜೊತೆ ಹೊರಗಿನವರೂ ಸೇರಿ ಸುಜನ್ ಶೆಟ್ಟಿ ಮೇಲೆ ಕೈಯಿಂದ ಹಾಗೂ ಕಾಲಿನಿಂದ ಹಿಗ್ಗಾಮುಗ್ಗ ಥಳಿಸಿದ್ದು, ಗಾಯಗೊಂಡ ಸುಜನ್ ನ್ನು ಮುಲ್ಕಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಕಾಲೇಜಿನಲ್ಲಿ ಇನ್ನಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Scroll to Top