ಮರಕ್ಕೆ ಢಿಕ್ಕಿ ಹೊಡೆದ ಕಾರು ► ಚಾಲಕ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com
ಶೃಂಗೇರಿ, ನ.14. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಾವಡಿ ಸಮೀಪ ನಡೆದಿದೆ.





ಮೃತರನ್ನು ಕಾರು ಚಾಲಕ ಅಡುಗೆ ವೃತ್ತಿ ಮಾಡುತ್ತಿದ್ದ ಉಳುವೆ ನಿವಾಸಿ ಸತ್ಯನಾರಾಯಣ(64) ಎಂದು ಗುರುತಿಸಲಾಗಿದೆ. ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸತ್ಯನಾರಾಯಣ ಸ್ಥಳದಲ್ಲೇ ಮೃತಪಟ್ಟಿದ್ದಾರೆ.






ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!
Scroll to Top