ಬಿಜೆಪಿ ನಾಯಕನ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಆ. 09. ತೆಲಂಗಾಣದ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.


ಮಿಯಾಪುರ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಜ್ಞಾನೇಂದ್ರ ಪ್ರಸಾದ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಮನೆಯ ಫ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

Scroll to Top