ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ➤ ಬೈಕ್ ನಲ್ಲಿ ಏಕಾಂಗಿಯಾಗಿ ದೇಶ ಪರ್ಯಟನೆ ಮಾಡಿದ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 09. ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸವಿನೆನಪಿನಲ್ಲಿ ಕಾಸರಗೋಡು ಮೂಲದ, ಮಂಗಳೂರಿನ ಕೆನರಾ ಗರ್ಲ್ಸ್ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ ಅಮೃತಾ ಜೋಷಿ ಏಕಾಂಗಿಯಾಗಿ ಬೈಕ್ ನಲ್ಲಿ ದೇಶ ಪರ್ಯಟನೆ ಮಾಡಿದ್ದಾರೆ.

21 ವರ್ಷ ಅಮೃತಾ ಜೋಷಿ ತಿರಂಗ ಯಾತ್ರಾ ಅಭಿಯಾನದ ಅಂಗವಾಗಿ, ದೇಶದ ಏಕತೆಯನ್ನು ಸಾರುವ ಸಲುವಾಗಿ ಕಳೆದ 3 ತಿಂಗಳುಗಳಿಂದ ಏಕಾಂಗಿಯಾಗಿ ಬೈಕ್ ನಲ್ಲಿ 22,000 ಕಿ.ಮೀ ಸಂಚರಿಸಿ ದೇಶ ಪರ್ಯಟನೆ ಮಾಡಿದ್ದಾರೆ. ಈಶಾನ್ಯ ಭಾರತ, ಕಾಶ್ಮೀರ ಸೇರಿದಂತೆ ಬರ್ಮಾ, ಬಾಂಗ್ಲಾ, ನೇಪಾಳದ ಗಡಿಯಲ್ಲಿಯೂ ಸಂಚರಿಸಿ ಅಲ್ಲಿ ನಮ್ಮ ಭಾರತೀಯ ಸೈನಿಕರ ಸವಾಲಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಬಂದಿದ್ದಾರೆ.

Also Read  ಒಡಿಶಾ ರೈಲು ದುರಂತ….! - ಇನ್ನೂ ಪತ್ತೆಯಾಗದ 29 ಮೃತದೇಹದ ಗುರುತು

error: Content is protected !!
Scroll to Top