ಮನೆಮೇಲೆ ಮರ ಬಿದ್ದು ತಾಯಿ- ಮಗಳು ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಆ. 10. ಮನೆ ಮೇಲೆ ಮರ ಬಿದ್ದ ಪರಿಣಾಮ ತಾಯಿ ಮತ್ತು ಮಗಳು ದಾರುಣವಾಗಿ ಮೃತಪಟ್ಟ ಘಟನೆ ಮೂಡಿಗೆರೆ ಬಳಿಯ ಕೆ.ತಲಗೂರು ಗ್ರಾಮದಲ್ಲಿ ಮಂಗಳವಾರದಂದು ರಾತ್ರಿ ನಡೆದಿದೆ.


ಮೃತರನ್ನು ಚಂದ್ರಮ್ಮ ಹಾಗೂ ಮಗಳು ಸರಿತಾ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಚಂದ್ರಮ್ಮ ಹಾಗೂ ಮಕ್ಕಳಾದ ಸರಿತಾ, ಸುನಿಲ್ ಹಾಗೂ ದೀಕ್ಷಿತ್ ಎಂಬವರು ಮಲಗಿದ್ದ ವೇಳೆ ಮನೆಯ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಮನೆಯ ಮೇಲೆ ಬಿದ್ದಿದ್ದು, ಪರಿಣಾಮ ಮನೆಯೊಳಗೆ ಮಲಗಿದ್ದ ಸರಿತಾ ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದು, ಚಂದ್ರಮ್ಮರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ಕೊರೋನಾದಿಂದ ಮೃತಪಟ್ಟ ಕಡಬದ ವ್ಯಕ್ತಿ ➤ ಪಿಎಫ್ಐ ಕಾರ್ಯಕರ್ತರಿಂದ ಅಂತ್ಯಕ್ರಿಯೆ

error: Content is protected !!
Scroll to Top