ಕಡಬ: ತಹಶೀಲ್ದಾರ್ ನೇತೃತ್ವದಲ್ಲಿ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಆ. 10. ಕಡಬ ತಾಲೂಕು ರಾಷ್ಟಿಯ ಹಬ್ಬಗಳ ಆಚರಣಾ ಸಮಿತಿಯ ನೇತೃತ್ವದಲ್ಲಿ 75ನೇ ಸ್ವಾತಂತ್ರೋತ್ಸವವನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಕಡಬದ ತಹಶೀಲ್ದಾರ್ ಅನಂತಶಂಕರ್ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು.

ಬಳಿಕ ಮಾತನಾಡಿದ ತಹಶೀಲ್ದಾರ್ ಅನಂತಶಂಕರ್, ಸ್ವಾತಂತ್ರೋತ್ಸವದ ಮುನ್ನ ಮೂರು ದಿನಗಳ ಕಾಲ ಪ್ರತಿಯೊಬ್ಬರ ಮನೆಯಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ರಾಷ್ಟಧ್ವಜ ಹಾರಾಟ ಕಡ್ಡಾಯ ಎಂದು ಸೂಚಿಸಿದರು. ಆ. 15ರಂದು ಕ್ಷೇತ್ರ ಶಾಸಕ ಸಚಿವರಾದ ಎಸ್.ಅಂಗಾರ ರವರು ಸ್ವಾತಂತ್ರೋತ್ಸವದ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ತಾ.ಪಂ, ಪ.ಪಂ, ಜಿ.ಪಂ. ಆಡಳಿತ ಮಂಡಳಿ ಅಸ್ತಿತ್ವ ಇಲ್ಲದ ಕಾರಣ ಕಡಬ ತಾ.ಪಂ ಆಡಳಿತಾಧಿಕಾರಿ ಸೀತಾ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಪೊಲೀಸರ ಗೌರವ ವಂದನೆಯೊoದಿಗೆ ಧ್ವಜಾರೋಹಣ ನಡೆದು ಬಳಿಕ ಮೆರವಣಿಗೆಯೊಂದಿಗೆ ಸಾಗಿ ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ತಾಲೂಕಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳನ್ನು ಹಾಗೂ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಅಫ್ರಿದಿ ಅವರುಗಳನ್ನು ಸನ್ಮಾನಿಸಿ ಗೌರವಿಸಲಾಗುವುದು ಎಂದು ಹೇಳಿದರು. ಸಭೆಯಲ್ಲಿ ಕಡಬ ಪ.ಪಂ. ಮುಖ್ಯಾಧಿಕಾರಿ ಫಕೀರ ಮೂಲ್ಯ, ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಢಾರಿ, ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ಕಜೆಮೂಲೆ, ಕಡಬ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್, ಕಡಬ ತಾಲೂಕು ಪಶುವೈದ್ಯಾಧಿಕಾರಿ ಡಾ|ಅಜಿತ್, ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್‌ಮಲೆ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಕಾರಿಗಳು ಪಾಲ್ಗೊಂಡಿದ್ದರು.

Also Read  ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

error: Content is protected !!
Scroll to Top