ಬಿಜೆಪಿಯನ್ನು ಗೆಲ್ಲಿಸುವಂತೆ ಯಡಿಯೂರಪ್ಪರಿಂದ ಕರೆ ► ಬಿಜೆಪಿ ಅಧಿಕಾರಕ್ಕೆ ಬಂದರೆ ಕರಾವಳಿಯ ಭಯೋತ್ಪಾದನೆಗೆ ಕ್ರಮ

(ನ್ಯೂಸ್ ಕಡಬ) newskadaba.com ಮುರುಡೇಶ್ವರ, ನ.15. ಬಿಜೆಪಿ ಅಧಿಕಾರ ವಹಿಸಿಕೊಂಡ ಮರುದಿನವೇ ಕರಾವಳಿಯಲ್ಲಿ ಭಯೋತ್ಪಾದನೆಯನ್ನು ಮಟ್ಟಹಾಕಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮುರುಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಸುಮಾರು ನೂರಕ್ಕೂ‌ ಅಧಿಕ ಜನರು ಭಯೋತ್ಪಾದಕ ಸಂಘಟನೆಯಾದ ಐಸಿಸ್ ಸೇರಿದ್ದು‌, ಇದರ ಪರಿಣಾಮವು ಕರಾವಳಿ ಭಾಗದಲ್ಲೂ ಕಂಡು ಬಂದಿದೆ. ರಾಜ್ಯದಲ್ಲಿ ಪಿ.ಎಫ್.ಐ, ಎಸ್.ಡಿ.ಪಿ.ಐ ಸಂಘಟನೆ ಸಕ್ರಿಯವಾಗಿದ್ದು ಇದಕ್ಕೆ ಸಿದ್ದರಾಮಯ್ಯನವರೇ ಹೊಣೆಯಾಗಿದ್ದಾರೆ ಅಂತ ಆರೋಪಿಸಿದರು. ರಾಜ್ಯದಲ್ಲಿ ಸುಮಾರು 42 ಸಾವಿರ ಖಾಸಗಿ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ತಕ್ಷಣ ವೈದ್ಯರ ಜತೆ ಮಾತುಕತೆ ನಡೆಸಿ ಬಗೆಹರಿಸದಿದ್ದಲ್ಲಿ ರಾಜ್ಯದ ಜನತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ‌ಎಂದರು.

Also Read  ಡಿಸೆಂಬರ್ ನಿಂದ "ಮುಖ್ಯಮಂತ್ರಿ ಅನಿಲ ಭಾಗ್ಯ" ಯೋಜನೆ ಜಾರಿ ► ಯಾರಿಗೆಲ್ಲ ಸಿಗಲಿದೆ ರಾಜ್ಯ ಸರಕಾರದ ಈ ಯೋಜನೆ..??

error: Content is protected !!
Scroll to Top