ಪ್ರವೀಣ್ ಹತ್ಯೆಯ ಪ್ರಮುಖ ಮೂವರು ಆರೋಪಿಗಳ ಬಂಧನ..? ➤‌ ಪ್ರಕರಣಕ್ಕೆ ಸಂಬಂಧಿಸಿ ಮಧ್ಯಾಹ್ನ ಪೊಲೀಸರಿಂದ ಪತ್ರಿಕಾಗೋಷ್ಠಿ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಆ.11. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದುಬಂದಿದೆ.

ಇದಕ್ಕೆ ಪುಷ್ಠಿ ನೀಡುವಂತೆ ಇಂದು ಮಧ್ಯಾಹ್ನ 12.30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಛೇರಿಯಲ್ಲಿ ಪ್ರಕರಣಕ್ಕೆ ಸಂಬಂಧಿಸಿ ಇದೇ ಮೊದಲ ಬಾರಿಗೆ ಪತ್ರಿಕಾಗೋಷ್ಠಿ ಕರೆಯಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡುವ ಸಂಭವವಿದೆ. ಈಗಾಗಲೇ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಪ್ರಮುಖ ಮೂವರು ಆರೋಪಿಗಳಿಗಾಗಿ ಬಲೆ ಬೀಸಿದ್ದರು‌. ಬುಧವಾರದಂದು ಎಡಿಜಿಪಿಯವರು ಆರು ಜಿಲ್ಲೆಗಳ ಎಸ್ಪಿಗಳನ್ನು ಕರೆಸಿ ವಿಶೇಷ ಸಭೆ ನಡೆಸಿದ್ದರು.

Also Read  ಅಕ್ರಮವಾಗಿ ಮರಳು ಸಾಗಾಟ 15 ಲೋಡ್‌ ಮರಳು ಪೊಲೀಸ್ ವಶಕ್ಕೆ

error: Content is protected !!
Scroll to Top