(ನ್ಯೂಸ್ ಕಡಬ) newskadaba.com ಮಂಗಳೂರು, ಆ. 11. ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ.
ದುಬೈನಿಂದ ಮಂಗಳೂರಿಗೆ ಮರಳುತ್ತಿದ್ದ ಕಾಸರಗೋಡು ನಿವಾಸಿ, ಚಪ್ಪಲಿಯಲ್ಲಿ 332 ಗ್ರಾಂ ಚಿನ್ನ ಸಾಗಿಸುತ್ತಿದ್ದು, ತಪಾಸಣೆಯ ವೇಳೆ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.