ಮುಖೇಶ್ ಅಂಬಾನಿಗೆ ಬೆದರಿಕೆ ಕರೆ ಆರೋಪ ➤‌ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 15. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ಹಿನ್ನೆ ವ್ಯಕ್ತಿಯೋರ್ವನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.


ಬಂಧಿತನನ್ನು ಅಫ್ಜಲ್ ಎಂದು ಗುರುತಿಸಲಾಗಿದೆ. ಈತ ಇಂದು ಬೆಳಗ್ಗೆ ಮುಂಬೈನ ಗಿರ್‌ಗಾಂವ್‌ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಲ್ಯಾಂಡ್‌ಲೈನ್ ಸಂಖ್ಯೆಗೆ 8 ಬಾರಿ ಬೆದರಿಕೆ ಕರೆ ಮಾಡಿರುವುದಾಗಿ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಆಡಳಿತಾಧಿಕಾರಿಗಳು ಡಿಬಿ ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದರ ಮೇರೆಗೆ ಇದೀಗ ಅಫ್ಜಲ್ ಎಂಬಾತನನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

Scroll to Top