ವಿಟ್ಲ: ಪಿಕಪ್ ವಾಹನ ಹಾಗೂ ಕಾರು ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ವಿಟ್ಲ, ಆ. 20. ಕಾರು ಮತ್ತು ಪಿಕಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಉಕ್ಕುಡ ಬುಳೇರಿಕಟ್ಟೆ ರಸ್ತೆಯ ನೀರ್ಕಜೆ ಎಂಬಲ್ಲಿ ನಡೆದಿದೆ.

ಪಿಕಪ್ ವಾಹನ ಚಾಲಕ ಹಠಾತ್ ಬ್ರೇಕ್ ಹಾಕಿದ್ದರಿಂದ ಹಿಂಬದಿಯಲ್ಲಿದ್ದ ಕಾರು ನಿಯಂತ್ರಣ ಸಿಗದೆ ಪಿಕಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಿಂದ ಕಾರಿನ ಮುಂಭಾಗಕ್ಕೆ ಹಾನಿಯಾಗಿದ್ದು, ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

error: Content is protected !!
Scroll to Top