ಬೆಳ್ತಂಗಡಿ: ಬೈಕ್ ಹಾಗೂ ಕಾರಿನ ನಡುವೆ ಅಪಘಾತ ➤‌ ಸವಾರ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 20. ಬೈಕ್ ಮತ್ತು ಕಾರಿನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಪಡಂಗಡಿ ಪೆರ್ನಮಂಜೆ ತಿರುವಿನಲ್ಲಿ ನಡೆದಿದೆ.

ಬೆಳ್ತಂಗಡಿಯಿಂದ ಮೂಡಬಿದಿರೆ ಕಡೆಗೆ ತೆರಳುತ್ತಿದ್ದ ಮಾರುತಿ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Also Read  ಕಾಸರಗೋಡು: ಭಾರೀ ಮಳೆಗೆ ಮನೆಯ ಛಾವಣಿ ಕುಸಿತ

error: Content is protected !!
Scroll to Top