(ನ್ಯೂಸ್ ಕಡಬ) newskadaba.com ಮಂಡ್ಯ, ಆ. 22. ಮಂಗಳೂರು ಮೂಲದ ಆರ್ ಎಸ್ ಎಸ್ ಮುಖಂಡ ಜಗನ್ನಾಥ ಶೆಟ್ಟಿ ಹನಿಟ್ರ್ಯಾಪ್ ಸುಳಿಯಲ್ಲಿ ಸಿಲುಕಿಕೊಂಡಿದ್ದು, 50 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.
ಈ ಸಂಬಂಧ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ಚಿನ್ನದ ವ್ಯಾಪಾರಿ, ಆರ್ ಎಸ್ ಎಸ್ ಮುಖಂಡ ಜಗನ್ನಾಥ ಶೆಟ್ಟಿ ದೂರು ನೀಡಿದ್ದಾರೆ. ಮಂಡ್ಯದ ಶ್ರೀನಿಧಿ ಗೋಲ್ಡ್ ಮಾಲೀಕರಾಗಿದ್ದ ಇವರು, ಮಂಗಳೂರಿಗೆ ತೆರಳಲು ಮಂಡ್ಯದಲ್ಲಿ ಬಸ್ ಗಾಗಿ ಕಾಯುತ್ತಿದ್ದ, ವೇಳೆ ನಾಲ್ವರು ಮೈಸೂರಿಗೆ ಡ್ರಾಪ್ ಕೊಡುವುದಾಗಿ ಕಾರಿನಲ್ಲಿ ಕರೆದೊಯ್ದಿದ್ದರು. ಬಳಿಕ ಲಾಡ್ಜ್ ಗೆ ಕರೆದುಕೊಂಡು ಹೋದ ಗ್ಯಾಂಗ್ 4 ಕೋಟಿಗೆ ಬೇಡಿಕೆ ಇಟ್ಟಿದೆ. ಆದರೆ ಜಗನ್ನಾಥ ಶೆಟ್ಟಿ 50 ಲಕ್ಷ ರೂಪಾಯಿ ನೀಡಿ ತೆರಳಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ಗ್ಯಾಂಗ್ ಮತ್ತೆ ಹಣಕ್ಕೆ ಬೇಡಿಕೆಯಿಟ್ಟಿದ್ದು, ಇದರಿಂದ ಜಗನ್ನಾಥ ಶೆಟ್ಟಿ ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇರೆಗೆ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.