ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ ➤‌ ಜಿಮ್ ಮಾಡುತ್ತಿದ್ದ ವೇಳೆ ಎದೆನೋವು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 22. ವರ್ಕ್ ಔಟ್ ಮಾಡುತ್ತಿದ್ದ ವೇಳೆ ಗೃದಯಾಘಾತವಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ, ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ.

ಬೆಳಗ್ಗೆ ಜಿಮ್‌ಗೆ ತೆರಳಿ ವರ್ಕೌಟ್ ಮಾಡುತ್ತಿದ್ದಾಗ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ನಾಗರಭಾವಿಯ ಯುನಿಟಿ ಲೈಫ್ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆದರೆ ದಾರಿಮಧ್ಯೆಯೇ ಗುರುಲಿಂಗಸ್ವಾಮಿ ಕೊನೆಯುಸಿರೆಳೆದಿದ್ದಾರೆ. ಮೂಲತಃ ಬೆಳಗಾವಿ ಜಿಲ್ಲೆಯ ರಾಮದುರ್ಗದವರಾಗಿರುವ ಗುರುಲಿಂಗಸ್ವಾಮಿ ಹೊಳೀಮಠ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಅಲ್ಲದೇ, ಕನ್ನಡದ ರಾಜ್ಯ ಮಟ್ಟದ ದಿನಪತ್ರಿಕೆ ಮತ್ತು ಎಲೆಕ್ಟ್ರಾನಿಕ್ ಮೀಡಿಯಾದಲ್ಲಿಯೂ 1998 ರಿಂದ ಸೇವೆ ಸಲ್ಲಿಸುತ್ತಿದ್ದಾರೆ. ಹಿರಿಯ ಪತ್ರಕರ್ತರಾಗಿದ್ದ ಅವರು, ಈ ಹಿಂದೆ ಗೃಹ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ಅವರ ಸಾರ್ವಜನಿಕ ಸಂಪರ್ಕ ಅಧಿಕಾರಿಯಾಗಿದ್ದರು. ಬಳಿಕ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬೆನ್ನಲ್ಲೇ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ತಮ್ಮ ಮಾಧ್ಯಮ ಸಂಯೋಜಕರನ್ನಾಗಿ ನೇಮಕ ಮಾಡಿಕೊಂಡಿದ್ದರು.

Also Read  ಪಿಎಸ್ಐ ನೇಮಕಾತಿ ಹಗರಣ ➤ 52 ಆರೋಪಿಗಳನ್ನು ಶಾಶ್ವತ ಡಿಬಾರ್ ಮಾಡಿ ಆದೇಶಿಸಿದ ರಾಜ್ಯ ಸರಕಾರ

error: Content is protected !!
Scroll to Top