ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಭೇದಿಸಿದ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಿದ ಎಸ್ಪಿ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಜುಲೈ 26ರಂದು ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಪ್ರವೀಣ್ ನೆಟ್ಟಾರು ಪ್ರಕರಣದ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿ ದಸ್ತಗಿರಿ ಮಾಡುವಲ್ಲಿ ಸಹಕರಿಸಿದ ಪೊಲೀಸರಿಗೆ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಪ್ರಶಂಸನಾ ಪತ್ರವನ್ನು ಹಾಗೂ ಡಿಜಿ ನೀಡಿದ ಹತ್ತು ಲಕ್ಷ ರೂ. ಬಹುಮಾನದ ಮೊತ್ತವನ್ನು ನೀಡಿ ಗೌರವಿಸಿದರು.


ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಕಾರ್ಯಪ್ರವೃತ್ತರಾದ ಒಟ್ಟು 82 ಜನ ಪೊಲೀಸ್ ಸಿಬ್ಬಂದಿಗಳಿಗೆ ಹಂಚಿಕೆ ಮಾಡಿ ಗೌರವಿಸಲಾಯಿತು. ಪ್ರಕರಣ ಬೇಧಿಸುವಲ್ಲಿ ಕಾರ್ಯ ಪ್ರವೃತ್ತರಾಗಿದ್ದ ಡಿವೈಎಸ್ಪಿ ಡಾ. ಗಾನ.ಪಿ ಕುಮಾರ್ ನೇತೃತ್ವದ ಪುತ್ತೂರು ನಗರ ಹಾಗೂ ಸಂಪ್ಯ ಠಾಣಾ ಪೊಲೀಸರನ್ನು ಕೂಡಾ ಈ ಸಂದರ್ಭದಲ್ಲಿ ಗೌರವಿಸಲಾಯಿತು.

Scroll to Top