ಮಂಗಳೂರು: ಕೊಲೆಯತ್ನ ಆರೋಪಿಗೆ ಗುಂಡೇಟು



(ನ್ಯೂಸ್ ಕಡಬ) newskadaba.com ಮಂಗಳೂರು, ಆ. 22. ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ಆರೋಪಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಮಂಗಳೂರು ಗ್ರಾಮಾಂತರ ಠಾಣೆಯ ಕಂಬಳ ಎಂಬಲ್ಲಿ ನಡೆದಿದೆ.







ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಗುಂಡೇಟು ತಗುಲಿದಾತ. ಕಳೆದೆರಡು ದಿನಗಳ ಹಿಂದೆ ನಗರದ ಹೊರವಲಯದಲ್ಲಿ ನಡೆದ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಈತನನ್ನು ಇಂದು ಸ್ಥಳ ಮಹಜರಿಗೆಂದು ಘಟನಾ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಆರೋಪಿ ಪೊಲೀಸರಿಗೆ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ್ದು, ಈ ಸಂದರ್ಭ ಪೊಲೀಸರು ಫೈರಿಂಗ್ ನಡೆಸಿದ್ದಾರೆ ಎಂದು ಹೇಳಲಾಗಿದೆ. ಈತ ಆ.19 ರಂದು ತನ್ನ ಸಂಬಂಧಿಕರೊಬ್ಬರನ್ನು ಕೊಲೆಗೆ ಯತ್ನಿಸಿದ್ದ ಎನ್ನಲಾಗಿದೆ. ಗುಂಡೇಟು ತಿಂದ ಮುಸ್ತಾಕ್ ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಆಸ್ಪತ್ರೆಗೆ ಮಂಗಳೂರು ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ.






error: Content is protected !!
Scroll to Top