(ನ್ಯೂಸ್ ಕಡಬ) newskadaba.com ಮಂಗಳೂರು, ಆ. 23. ಹಿಜಾಬ್ ವಿವಾದ ತಣ್ಣಗಾಗಿದ್ದರೂ ಅದರ ಪರಿಣಾಮ ಮಾತ್ರ ಇದುವರೆಗೂ ನಿಂತಿಲ್ಲ. ತರಗತಿಗೆ ಹಿಜಾಬ್ ಧರಿಸಿ ಬರಲು ಅವಕಾಶ ನೀಡದ ಹಿನ್ನೆಲೆ ಒಟ್ಟು 145 ಕಾಲೇಜು ವಿದ್ಯಾರ್ಥಿನಿಯರು ತಮ್ಮ ಟಿಸಿಯನ್ನೇ ಹಿಂಪಡೆದ ಘಟನೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಯಾವುದೇ ಧಾರ್ಮಿಕ ಚಿಹ್ನೆ ಧರಿಸಿ ಶಾಲಾ-ಕಾಲೇಜಿನ ತರಗತಿಗಳಿಗೆ ಹೋಗುವಂತಿಲ್ಲ ಎಂದು ಹೈಕೋರ್ಟ್ ಆದೇಶ ನೀಡಿದ್ದರೂ ಕೂಡಾ ಹಿಜಾಬ್ ಧರಿಸಿ ಬರಲು ಅವಕಾಶ ನೀಡುವಂತೆ ಮಂಗಳೂರಿನಲ್ಲಿ ಕಾಲೇಜು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದರು. ಹಿಜಾಬ್ ಧರಿಸಿ ಬರಲು ಅವಕಾಶವಿಲ್ಲ ಎಂದು ಖಡಕ್ ಆಗಿ ಸೂಚಿಸಿದ್ದ ಮಂಗಳೂರು ವಿಶ್ವವಿದ್ಯಾಲಯದ ಉಪಕುಲಪತಿ ಪಿ. ಎಸ್.ಯಡಪಡಿತ್ತಾಯ ವಿದ್ಯಾರ್ಥಿಯರಿಗೆ ಟಿಸಿ ಪಡೆದುಕೊಳ್ಳುವಂತೆ ಹೇಳಿದ್ದರು.