ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ಯುವಕ ನಾಪತ್ತೆ ➤‌ 4 ದಿನಗಳ ಬಳಿಕ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 24. ಇಲ್ಲಿನ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ಹಾರಿದ್ದ ಬೆಂಗಳೂರು ಯುವಕನ ಮೃತದೇಹವು ಸತತ ನಾಲ್ಕು ದಿನಗಳ ಕಾರ್ಯಾಚರಣೆಯ ಬಳಿಕ ಇಂದು ಸಂಜೆ ಮೃತದೇಹ ಪತ್ತೆಯಾಗಿದೆ.

ಪ್ರವಾಸಿಗರಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದ ಬೆಂಗಳೂರು ದೀಪಾಂಜಲಿ ನಗರದ ತಂಡದಲ್ಲಿದ್ದ ಯುವಕ ಶಿವು ಎಂಬಾತ ಕುಕ್ಕೆ ಸುಬ್ರಹ್ಮಣ್ಯದಿಂದ ಹಿಂತಿರುಗುವ ವೇಳೆ ಕುಮಾರಧಾರಾ ನದಿಯಲ್ಲಿ ಸ್ನಾನಕ್ಕೆಂದು ನದಿಗೆ ಹಾರಿದ್ದು, ಬಳಿಕ ನಾಪತ್ತೆಯಾಗಿದ್ದ. ಇದೀಗ ಸುಮಾರು 15 ಜನ ನುರಿತ ಈಜುಗಾರರು, ಸಮಾಜ ಸೇವಕ ರವಿಕಕ್ಕೆಪದವು, ಅಗ್ನಿಶಾಮಕ ದಳ, ಸುಬ್ರಹ್ಮಣ್ಯ ಗ್ರಾಮ ಪಂಚಾಯತ್, ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಗೃಹರಕ್ಷಕ ದಳ, ಸ್ಥಳೀಯ ಜನನಾಯಕರು ಹಾಗೂ ಸ್ಥಳೀಯರು ಸೇರಿ ಸತತ ನಾಲ್ಕು ದಿನಗಳ ಕಾರ್ಯಾಚರಣೆ ನಡೆಸಿ ಇದೀಗ ಇಂದು ಸಂಜೆ ಮೃತದೇಹ ಪತ್ತೆಯಾಗಿದೆ.

Also Read  ಜಿಲ್ಲೆಯಲ್ಲಿ 8 ಕ್ಷೇತ್ರಗಳಿಗೆ 58 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

error: Content is protected !!
Scroll to Top