ಇಂದು ಸಂಜೆ ಕಡಬದಲ್ಲಿ ದಿ| ಗೋಪಾಲರಾವ್ ರವರಿಗೆ ಸಾರ್ವಜನಿಕ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಕಡಬ, ನ.16. ಇತ್ತೀಚೆಗೆ ನಿಧನರಾದ ರಾಷ್ಟ್ರಪ್ರಶಸ್ತಿ ವಿಜೇತ ಧಾರ್ಮಿಕ ಮುಂದಾಳು, ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಹರಿಕಾರ ದಿ| ಗೋಪಾಲರಾವ್ ಬಿಳಿನೆಲೆರವರಿಗೆ ಕಡಬದ ವಿವಿಧ ಸಂಘ ಸಂಸ್ಥೆಗಳ ಹಾಗೂ ಸಾರ್ವಜನಿಕರ ಪರವಾಗಿ ನುಡಿನಮನ ಕಾರ್ಯಕ್ರಮವು ಇಂದು ನಡೆಯಲಿದೆ.

ಇಂದು (ನ.16.) ಸಂಜೆ 4.30 ಗಂಟೆಗೆ ಕಡಬದ ಅನುಗ್ರಹ ಮಿನಿ ಸಭಾಂಗಣದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಹಾಗೂ ನುಡಿನಮನ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top