ಕೆಎಸ್ಸಾರ್ಟಿಸಿ ಬಸ್ – ಸ್ಕೂಲ್ ಬಸ್ ಢಿಕ್ಕಿ ► ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ನ.16, ರಾಮನಗರ, ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ಸೊಂದು ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದೆ.

ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು, ಮೃತ ವಿದ್ಯಾರ್ಥಿಗಳ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಕನಕಪುರ-ತೇರುಬೀದಿ ಮಾರ್ಗವಾಗಿ ಮರಳವಾಡಿ ಕಡೆಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ ಕಿತ್ತು ಬಂದು, ನಂತರ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

Also Read  ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ➤ ಕಡಬದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಹರ್ಷಾಚರಣೆ

ಘಟನಾ ಸ್ಥಳಕ್ಕೆ ಹಾರೋಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಕನಕಪುರ ತಾಲೂಕು ಆಸ್ಪತ್ರೆಗೆ ರವಾನಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top