ಮಾಜಿ ಸಿಎಂ ಸಿದ್ದರಾಮಯ್ಯರವರ ಸಹೋದರ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ಆ. 27. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸಹೋದರ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.


ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ವಾಸವಾಗಿದ್ದ ಸಿದ್ದರಾಮೇಗೌಡ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಸಿದ್ದರಾಮಯ್ಯನವರು ಒಂದು ದಿನದ ಹಿಂದೆಯಷ್ಟೇ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದ್ದರು. ನಿನ್ನೆ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

 

Scroll to Top