ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿ ರುಂಡ ಕತ್ತರಿಸಿದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಬೆಳಗಾವಿ, ಆ. 27. ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನನ್ನು ಅಡ್ಡಗಟ್ಟಿ ಆತನ ರುಂಡವನ್ನು ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿಯ ತಾರಿಹಾಳ್ ಕ್ರಾಸ್ ಬಳಿಯಲ್ಲಿ ನಡೆದಿದೆ.

ಕೊಲೆಯಾದವರನ್ನು ಗದಗಯ್ಯ ಹಿರೇಮಠ ಎಂದು ಗುರುತಿಸಲಾಗಿದೆ. ಇವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ತಾರಿಹಾಳ ಕ್ರಾಸ್ ಬಳಿ ತಡೆದ ದುಷ್ಕರ್ಮಿಗಳು, ಅವರ ರುಂಡವನ್ನು ಕತ್ತರಿಸಿದ್ದಾರೆ. ತಕ್ಷಣವೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ಧು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಹಿರೇಬಾಗೇವಾಡಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ ಎನ್ನಲಾಗಿದೆ.

Also Read  ಪುತ್ತೂರು, ಕಡಬ ಉಭಯ ತಾಲೂಕುಗಳಲ್ಲಿ ಇಂದು 7 ಕೊರೋನಾ ಪಾಸಿಟಿವ್

error: Content is protected !!