ತಮಿಳುನಾಡಿನಲ್ಲಿ ರಸ್ತೆ ಅಪಘಾತ ➤‌ ಮಂಗಳೂರಿನ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ತಮಿಳುನಾಡಿನ ಆಂಬೂರು ಎಂಬಲ್ಲಿ ನಡೆದ ಭೀಕರ ರಸ್ತೆ ಅಪಘಾತ‌ದಲ್ಲಿ ಬಿ.ಸಿ.ರೋಡಿನ ಯುವಕನೋರ್ವ ಮೃತಪಟ್ಟ ಘಟನೆ ತಡರಾತ್ರಿ ಸಂಭವಿಸಿದೆ.

ಮೃತರನ್ನು ಇರ್ಷಾದ್ ತಲಪಾಡಿ (37) ಎಂದು ಗುರುತಿಸಲಾಗಿದೆ. ಮಂಗಳೂರು ಬಂದರಿನಿಂದ ತಮಿಳುನಾಡಿನ ಚೆನ್ನೈ ಮಾರುಕಟ್ಟೆಗೆ ಮೀನು ಸಾಗಿಸುತ್ತಿದ್ದ ಲಾರಿಯು ಆಂಬೂರ್ ಎಂಬಲ್ಲಿ ನಿಲ್ಲಿಸಿದ್ದ ವಾಹನಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆನ್ನಲಾಗಿದೆ.

Scroll to Top