ನೆಲ್ಯಾಡಿಯ ವ್ಯಕ್ತಿ ಕೊಕ್ಕಡದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಆ. 27. ನೆಲ್ಯಾಡಿಯ ವ್ಯಕ್ತಿಯೋರ್ವರು ತನ್ನ ಪತ್ನಿ ಮನೆಯಾದ ಕೊಕ್ಕಡದಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ನೆಲ್ಯಾಡಿ ಗ್ರಾಮದ ಮಾದೇರಿ ಪಲಸತಡ್ಕ ನಿವಾಸಿ ವಸಂತ ಮಾಡಿವಾಳ ಎಂದು ಗುರುತಿಸಲಾಗಿದೆ. ಧರ್ಮಸ್ಥಳದಲ್ಲಿ ಕಾವಲುಗಾರನಾಗಿ ಕೆಲಸ ಮಾಡಿಕೊಂಡಿದ್ದ ಇವರು, ಆ. 25ರಂದು ಮಧ್ಯಾಹ್ನ ಕೊಕ್ಕಡ ಗ್ರಾಮದ ಕೆಂಪಕೋಡಿಯಲ್ಲಿರುವ ಪತ್ನಿಯ ಮನೆಗೆ ಬಂದು ಮದ್ಯದ ಜೊತೆ ವಿಷಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣವೇ ಮನೆಯವರು ನೆಲ್ಯಾಡಿಯ ಆಸ್ಪತ್ರೆಗೆ ಕರೆತಂದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ. ವಿಪರೀತ ಕುಡಿತದ ಚಟಹೊಂದಿದ್ದ ವಸಂತ ಮಡಿವಾಳ ಅವರು ಪತ್ನಿಯೊಂದಿಗೆ ಆಗಾಗ ಜಗಳವಾಡುತ್ತಿದ್ದರು ಎಂದು ವರದಿಯಾಗಿದೆ. ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಬೆಳ್ತಂಗಡಿ: ನದಿ ನೀರಿಗೆ ವಿಷಪ್ರಾಷನ      ➤ನೀರು ಸರಬರಾಜು ಸ್ಥಗಿತ, ಮೀನುಗಳ ಮಾರಣಹೋಮ

error: Content is protected !!
Scroll to Top